Tuesday, June 23, 2026
spot_imgspot_img
spot_imgspot_img

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಾರ್ಜ್ ಕುರಿಯನ್

- Advertisement -
- Advertisement -

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ ಇಲಾಖೆಯ ರಾಜ್ಯ ಸಚಿವ, ಹಿರಿಯ ಬಿಜೆಪಿ ನಾಯಕ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ.

ಜಾರ್ಜ್ ಕುರಿಯನ್ ಅವರ 6 ವರ್ಷಗಳ ರಾಜ್ಯಸಭಾ ಸದಸ್ಯತ್ವದ ಅವಧಿ ಮುಗಿದಿರುವುದರಿಂದ ಅವರು ನಿಯಮಾನುಸಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಕಳಪೆ ಪ್ರದರ್ಶನದ ಕಾರಣದಿಂದಾಗಿ, ಈ ಬಾರಿ ಅವರನ್ನು ಮತ್ತೆ ರಾಜ್ಯಸಭೆಗೆ ಮರು ನಾಮನಿರ್ದೇಶನ ಮಾಡಲಾಗಿಲ್ಲ ಎಂದು ಹೇಳಲಾಗಿದೆ.

- Advertisement -

Related news

error: Content is protected !!
Skip to toolbar