Saturday, April 20, 2024
spot_imgspot_img
spot_imgspot_img

ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಕುರಿತು ಮಹತ್ವದ ಸೂಚನೆ ನೀಡಿದ ‘ಸುಪ್ರೀಂಕೋರ್ಟ್’!

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಜನವರಿ 31 ರ ಹೊತ್ತಿಗೆ ದೇಶದ ವಿವಿಧ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020 ರ ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಂಡ ಅಂಗನವಾಡಿಗಳ ಕಾರ್ಯನಿರ್ವಹಣೆ ಇನ್ನೂ ಆರಂಭಗೊಂಡಿಲ್ಲ. ಈ ತಿಂಗಳ ಆರಂಭದಲ್ಲಿ ಶಾಲಾ ಕಾಲೇಜುಗಳು ಬಹುತೇಕ ಆರಂಭವಾಗಿವೆ.

ಅಂಗನವಾಡಿ ಕೇಂದ್ರಗಳನ್ನು ಮತ್ತೆ ಆರಂಭಿಸಿ ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇನ್ನು ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ ಪೌಷ್ಠಿಕಾಂಶ, ತಾಯಿ ಮಗುವಿಗೆ ಆಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

- Advertisement -

Related news

error: Content is protected !!