ಹೊಸದಿಲ್ಲಿ: ಕೊರೊನಾದಿಂದ ಕೆಂಗೆಟ್ಟ ದಿಲ್ಲಿಯಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ತಮಿಳುನಾಡು ಮತ್ತು ಮಹಾರಾಷ್ಟ್ರ ನಂತರ ದಿಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೂ ಗುಣಮುಖರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಾಣುತ್ತಿದ್ದು ಸೋಂಕಿತರಲ್ಲಿ 72,088 ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ.ಕಳೆದ ವಾರ ಶೇ.26ರಷ್ಟಿದ್ದ ಸೋಂಕಿತರ ಪ್ರಮಾಣ ಪ್ರಸ್ತುತ ಶೇ. 10ಕ್ಕೆ ಬಂದು ತಲುಪಿದೆ.


ಅತಿ ಹೆಚ್ಚು ಕರೊನಾ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ಇವೆ. 6 ರಾಜ್ಯಗಳಿಂದ ದೇಶದ ಶೇ. 86 ಸಾವುಗಳು ವರದಿಯಾಗಿವೆ. ಮಹಾರಾಷ್ಟ್ರ, ದೆಹಲಿ, ಗುಜರಾತ್, ತಮಿಳುನಾಡು, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಅತೀ ಹೆಚ್ಚು ಮಂದಿ ಕರೊನಾಗೆ ಬಲಿಯಾಗಿದ್ದಾರೆ.ಕೊರೊನಾ ಸೋಂಕಿತ ಟಾಪ್ 5 ರಾಜ್ಯಗಳಲ್ಲಿ ರಿಕವರಿ ಪ್ರಮಾಣದಲ್ಲಿ ದಿಲ್ಲೆಯೇ ಮೊದಲ ಸ್ಥಾನದಲ್ಲಿದೆ. ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಗುಜರಾತ್ ಮತ್ತು ತಮಿಳುನಾಡಿನಲ್ಲಿ ಸಾವಿನ ಪ್ರಮಾಣ ಹೆಚ್ಚು.

