Sunday, June 29, 2025
spot_imgspot_img
spot_imgspot_img

ದೆಹಲಿ: ಆರು ಕೆ.ಜಿ. ಅಕ್ರಮ ಚಿನ್ನ ವಶ!!

- Advertisement -
- Advertisement -

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕಸ್ಟಂಮ್ಸ್ ಅಧಿಕಾರಿಗಳು ಆರು ಕಿಲೋ ಚಿನ್ನ ವಶಪಡಿಸಿಕೊಂಡಿದ್ದಾರೆ. ರೈಲು ನಿಲ್ದಾಣದ ಬಳಿ ನಡೆಸಲಾದ ಕಾರ್ಯಾಚರಣೆಯಲ್ಲಿ ಚಿನ್ನವನ್ನು ವಶಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದೇ ವೇಳೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಮಾದಕ ದ್ರವ್ಯ ಕೂಡ ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆರು ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಲಾಗಿದೆ. ತಾಂಜೇನಿಯಾದ ಅಡಿಸ್ ಅಬಾಬದಿಂದ ದೆಹಲಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಕೊಕೇನ್ ಪತ್ತೆ ಹಚ್ಚಲಾಗಿದೆ.

ಬಂಧಿತ ಆರೋಪಿ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿಯೆಂದು ಶಂಕಿಸಲಾಗಿದೆ. ಆರೋಪಿಯನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ.

- Advertisement -

Related news

error: Content is protected !!