Tuesday, June 9, 2026
spot_imgspot_img
spot_imgspot_img

ಭಾರತದ ಮಾಜಿ ನಾಯಕ ವಿಶ್ವಕಪ್ ವಿಜೇತ ಕಪಿಲ್ ದೇವ್ ಅವರಿಗೆ ಹೃದಯಾಘಾತ

- Advertisement -
- Advertisement -

ನವದೆಹಲಿ (ಅ.23): ಭಾರತದ ಮಾಜಿ ನಾಯಕ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಪಿಲ್ ದೇವ್ ಅವರನ್ನು ನವದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. 61 ವರ್ಷದ ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪತ್ರಕರ್ತೆ ಟೀನಾ ಥಾಕರ್ ಟ್ವಿಟ್ಟರ್ ಮೂಲಕ ಈ ಮಾಹಿತಿ ನೀಡಿದ್ದಾರೆ.


ಭಾರತದ ಮಾಜಿ ನಾಯಕ ಹಾಗೂ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರು, 1959ರ ಜನವರಿ 6ರಂದು ಚಂಡೀಗಢದಲ್ಲಿ ಜನಿಸಿ, 1978ರಲ್ಲಿ ಪಾಕಿಸ್ಥಾನ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 1983ರಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ನಲ್ಲಿ ಕಪಿಲ್ ದೇವ್ ನಾಯಕತ್ವದ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿತ್ತು. ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ ಸಾಧಿಸಿತ್ತು .

- Advertisement -

Related news

error: Content is protected !!