Friday, July 31, 2026
spot_imgspot_img
spot_imgspot_img

ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಪ್ರಭು ಚವ್ಹಾಣ್

- Advertisement -
- Advertisement -

ಬೆಂಗಳೂರು: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಾ.ಭರತ್ ಶೆಟ್ಟಿ .ವೈ ರವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿಯಿವೆ.

ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೊರೊನಾ ಕಾರಣದಿಂದ ಇದು ವಿಳಂಬವಾಗಿದೆ. ಮತ್ತೊಮ್ಮೆ ಮನವಿ ಮಾಡಿ ಆದಷ್ಟು ಶೀಘ್ರ ಭರ್ತಿ ಮಾಡಲಾಗುವುದು ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಮುಖ್ಯ ಪಶು ವೈದ್ಯಾಧಿಕಾರಿಗಳು(ಆಡಳಿತ), 39 ಮುಖ್ಯ ಪಶು ವೈದ್ಯಾಧಿಕಾರಿ, 10 ಹಿರಿಯ ಪಶು ವೈದ್ಯಾಧಿಕಾರಿ, 17 ಪಶು ವೈದ್ಯಾಧಿಕಾರಿ ಸೇರಿದಂತೆ ಒಟ್ಟು 72 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

- Advertisement -

Related news

error: Content is protected !!