Monday, June 8, 2026
spot_imgspot_img
spot_imgspot_img

ದೇರಳಕಟ್ಟೆ: ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ..!

- Advertisement -
- Advertisement -

ಮಂಗಳೂರು : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್‌ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೇಲಿನ ಎರಡು ಮಹಡಿಗಳಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿಯುವ NRI ವಿದ್ಯಾರ್ಥಿಗಳಿದ್ದು, ಎಲ್ಲರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದೆ. ಕಟ್ಟಡದ ಟಾಪ್ ಫ್ಲೋರ್‌ನಲ್ಲಿ ಸಭಾಂಗಣವಿದ್ದು, ಅಲ್ಲಿ ಯಾವುದೇ ಕಾರ್ಯಕ್ರಮಗಳಿರಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು ನಡೆಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಜನರೇಟರ್ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ತಗಲಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!