Saturday, May 15, 2021
spot_imgspot_img
spot_imgspot_img

ರಾಜ್ಯಸಭಾ ಸದಸ್ಯರಾಗಿ ದೇವೇಗೌಡ ಇಂದು ಪ್ರಮಾಣ ವಚನ ಸ್ವೀಕಾರ.

- Advertisement -
- Advertisement -

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮತ್ತು ಜಾತ್ಯಾತೀತ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಸಂಸತ್‍ನ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯರಾಗಿ ಎಚ್​ಡಿಡಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಹೀಗಾಗಿ ದೇವೇಗೌಡರು ಶನಿವಾರ ರಾತ್ರಿಯೇ ದೆಹಲಿಗೆ ಹೋಗಿದ್ದರು.

 ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಎಚ್.ಡಿ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ರಾಜ್ಯಸಭೆ ಸದಸ್ಯರಾದ ಬಳಿಕ ಇದೇ ಮೊದಲ ಬಾರಿ ದೇವೇಗೌಡರು ಕಲಾಪಕ್ಕೆ ಹಾಜರಾಗಿದ್ದಾರೆ. ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿಯಾಗಿದ್ದ ವೇಳೆ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.

- Advertisement -
- Advertisement -

MOST POPULAR

HOT NEWS

Related news

error: Content is protected !!