Thursday, July 16, 2026
spot_imgspot_img
spot_imgspot_img

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದ್ದು, ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ(ಜು.15) ರಾತ್ರಿ 10 ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!