Friday, August 7, 2026
spot_imgspot_img
spot_imgspot_img

ಅಭಿವೃದ್ಧಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ವೇತನ ವಿಚಾರಕ್ಕೆ ರಾಜ್ಯ ಸರ್ಕಾರ ತಮ್ಮ ಜತೆ ಚರ್ಚೆ ಮಾಡಿಲ್ಲ. ನನ್ನ ತವರು ರಾಜ್ಯ ಎನ್ನುವ ಕಾರಣಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆದರೆ, ಕರ್ನಾಟಕ ಸರ್ಕಾರ ಸಹಕಾರ ನೀಡುತ್ತಿಲ್ಲ.

ಬದಲಿಗೆ ಪ್ರತಿನಿತ್ಯ ಪ್ರಧಾನಿಯನ್ನು ನಿಂದಿಸುವುದೇ ಆಗಿದೆ. ದಿನವೂ ಪ್ರಧಾನಿಯನ್ನು ನಿಂದಿಸಿದರೆ ರಾಜ್ಯ ಅಭಿವೃದ್ಧಿ ಆಗುತ್ತದೆಯೇ ಎಂದು ಕಿಡಿಕಾರಿದರು.

- Advertisement -

Related news

error: Content is protected !!