- Advertisement -
- Advertisement -




ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಮ್ಮುಖದಲ್ಲಿ ಬಿಜೆಪಿ ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,” ದೇವೇಂದ್ರ ಫಡ್ನವಿಸ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ಹಾದಿ ಸುಗಮವಾಗಿರಲಿ, ಯಶಸ್ಸು ಸಿಗಲಿ ಎಂದು ಹಾರೈಸಿದರು.
- Advertisement -