- Advertisement -
- Advertisement -




ಬೆಂಗಳೂರು :ಕರ್ನಾಟಕ ಮಾಜಿ ಡಿಜಿ ಐಜಿಪಿ ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಚಾಕು ಇರಿದು ಕೊಲೆ ಮಾಡಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ ಈ ಘಟನೆ ನಡೆದಿದೆ.
ಕರ್ನಾಟಕದ ಕೇಡರ್ 1981ರ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ ಡಿಜಿ, ಐಜಿಪಿ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು ಮನೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದರು. ಪರಿಶೀಲನೆ ಮಾಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿಯೇ ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಘಟನೆ ತಿಳಿದ ಬೆನ್ನಲ್ಲಿಯೇ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಹೆಂಡಿಯೇ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
- Advertisement -