- Advertisement -
- Advertisement -

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತು ಬಹಿರಂಗಪಡಿಸುವಂತಿಲ್ಲ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ ಎಂ.ಎ. ಸಲೀಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕ್ಸ್ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವ ಬಗ್ಗೆ ಸೂಚಿಸಿದ್ದಾರೆ.


- Advertisement -








