- Advertisement -
- Advertisement -

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಸ್ಥಳದಲ್ಲಿ ಜಿಪಿಆರ್ ಕಾರ್ಯಾಚರಣೆ ಆರಂಭವಾಗಿದೆ.
ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಮುಂದೂಡಲ್ಪಡುತ್ತಿತ್ತು. ಇದೀಗ ಮಂಗಳವಾರ ಮಧ್ಯಾಹ್ನದ ವೇಳೆ ಇಲ್ಲಿ ಅಧಿಕೃತವಾಗಿ ಪರಿಶೀಲನಾ ಕಾರ್ಯ ಆರಂಭಿಸಿದ್ದಾರೆ.
ನೇತ್ರಾವತಿ-ಅಜೆಕುರಿ ರಸ್ತೆಯಲ್ಲಿ ನೇತ್ರಾವತಿ ನದಿ ಪಕ್ಕದ ಕಿಂಡಿ ಅಣೆಕಟ್ಟಿನ ಸಮೀಪದ 13ನೇ ಸ್ಥಳದಲ್ಲಿ ಸೋಮವಾರ ಮಧ್ಯಾಹ್ನ 3 ರಿಂದ 3:30ರ ವರೆಗೆ ಪ್ರಾಯೋಗಿಕ ಕಾರ್ಯಾಚರಣೆ ನಡೆದಿತ್ತು. ಇಂದು ಎಸ್.ಐ.ಟಿ ತಂಡದ ಅಧಿಕಾರಿಗಳು 12.45 ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ್ದಾರೆ. ಯಂತ್ರಗಳು ಸಿದ್ದವಾಗಿದೆ.
ಕಾರ್ಯಾಚರಣೆ ನಡೆಯಲಿರುವ ನೇತ್ರಾವತಿ ಅಜಿಕುರಿ ರಸ್ತೆಯನ್ನು ಸಂಪೂರ್ಣ ಮುಚ್ಚಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿಯೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
- Advertisement -








