Friday, April 26, 2024
spot_imgspot_img
spot_imgspot_img

ಧರ್ಮಸ್ಥಳ: ಬಸ್ ನಿಲ್ದಾಣದ ಬಳಿ ಜಿಂಕೆ ಚರ್ಮ ಮಾರಾಟಕ್ಕೆ ಯತ್ನ; ಆರೋಪಿ ಅಂದರ್

- Advertisement -G L Acharya panikkar
- Advertisement -

ಧರ್ಮಸ್ಥಳ: ಪುತ್ತೂರು ಅರಣ್ಯ ಸಂಚಾರಿದಳದ ಎಸ್.ಐ. ಜಾನಕಿ ನೇತೃತ್ವದ ತಂಡ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಜಿಂಕೆ ಚರ್ಮ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.

ಇದನ್ನೂ ಓದಿ: ಪ್ರೀತಿ ನಿರಾಕರಿಸಿದಕ್ಕೆ ಬಾಲಕಿಯನ್ನು ಕೊಂದ ಪಾಗಲ್ ಪ್ರೇಮಿ.!!

ಬೆಳಗಾವಿಯ ಹನುಮಂತ ಎಂಬಾತ ಬಂಧಿತ ಆರೋಪಿ. ಬೆಳಗಾವಿಯಿಂದ ಖಾಸಗಿ ಬಸ್ ಮೂಲಕ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು.

ಜಿಂಕೆ ಚರ್ಮ ಮಾರಾಟ ಮಾಡಲು ಗಿರಾಕಿಗಾಗಿ ಕಾಯುತ್ತಿದ್ದ ಬೆಳಗಾವಿಯ ಹನುಮಂತ (೩೧ವ) ಎಂಬಾತನನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎಸ್.ಐ. ಜಾನಕಿಯವರೊಂದಿಗೆ ಸಿಬ್ಬಂದಿಗಳಾದ ಸುಂದರ ಶೆಟ್ಟಿ, ವಿಜಯ ಸುವರ್ಣ, ಉದಯ ಕುಮಾರ್ ಮತ್ತು ಸಂತೋಷ್ ಭಾಗವಹಿಸಿದ್ದರು.

ಇದನ್ನೂ ಓದಿ: 23ನೇ ವಯಸ್ಸಿನಲ್ಲಿ 300 ಮಹಿಳೆಯರಿಗೆ ವಂಚಿಸಿದ ರಸಿಕ ರಾಜ!

- Advertisement -

Related news

error: Content is protected !!