Monday, June 22, 2026
spot_imgspot_img
spot_imgspot_img

ಧರ್ಮಸ್ಥಳ ಪ್ರಕರಣ; ಧರ್ಮಸ್ಥಳಕ್ಕೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡ ಎಸ್‌ಐಟಿ ಅಧಿಕಾರಿಗಳು..!

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರಕಾರ ನಿಯೋಜಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತಂಡದ ಅಧಿಕಾರಿಗಳು ಶುಕ್ರವಾರ ಧರ್ಮಸ್ಥಳ ಠಾಣೆಗೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡಿದ್ದಾರೆ.

ಎಸ್‌ಐಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದ್ದರು.

ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಶುಕ್ರವಾರದಿಂದಲೇ ಅಧಿಕೃತವಾಗಿ ತನಿಖಾ ಕಾರ್ಯ ಆರಂಭವಾಗಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!