Tuesday, September 15, 2026
spot_imgspot_img
spot_imgspot_img

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿ ಕಚೇರಿಗೆ ಸುಜಾತ ಭಟ್‌ ವಿಚಾರಣೆಗೆ ಹಾಜರು

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ವಿಚಾರಣೆಗೆ ಸುಜಾತ ಭಟ್ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ. ಮತ್ತು ವಿಠಲ ಗೌಡ ಅವರಿಗೆ ಇಂದು ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್‌ ನೀಡಿತ್ತು. ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರೂ ಬೆಳ್ತಂಗಡಿಯಲ್ಲಿದ್ದು, ಇಂದು ಮಹತ್ವದ ವಿಚಾರಣೆ ನಡೆಯುತ್ತಿದೆ.

- Advertisement -

Related news

error: Content is protected !!