Thursday, July 23, 2026
spot_imgspot_img
spot_imgspot_img

ಧರ್ಮಸ್ಥಳ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ

- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ಅಕ್ರಮ ಸಂಖ್ಯೆ 91/2017, ಐಪಿಸಿ ಕಲಂ 380 ಪ್ರಕರಣದಲ್ಲಿ ಆರೋಪಿಯಾಗಿದ್ದ ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್ ಡಾಬರ್ ವೆಂಕಟೇಶ್ ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಗೆ ಸಿಕ್ಕದೆ ತಲೆಮರೆಸಿಕೊಂಡಿದ್ದನು.ಆರೋಪಿಯ ಸುಳಿವು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ತುಮಕೂರು ಜಿಲ್ಲೆಯ ತಿಪಟೂರು ಎಂಬಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿಯನ್ನು ದಿನಾಂಕ 05-03-2026 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!