Thursday, May 2, 2024
spot_imgspot_img
spot_imgspot_img

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

- Advertisement -G L Acharya panikkar
- Advertisement -

ಧರ್ಮಸ್ಥಳ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮದರ್ಶಿಗಳು ಹಾಗೂ ರಾಜ್ಯ ಸಭಾ ಸದಸ್ಯ ಡಾ|| ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ದ.ಕ ಪೊಲೀಸ್ ಅಧೀಕ್ಷಕ ಡಾ|| ವಿಕ್ರಮ್ ಅಮಟೆ IPS, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯ ಮೋನ್ನಪ್ಪ ಗೌಡ ಹಾಗೂ ಇತರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲೇ ವಿಶಿಷ್ಟ ವಾಸ್ತುಶಿಲ್ಪದ ಪೊಲೀಸ್ ಠಾಣೆ..! 2.16 ಕೋಟಿ ವೆಚ್ಚದಲ್ಲಿ ನಿರ್ಮಾಣ
ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ಈ ಪೊಲೀಸ್ ಠಾಣೆ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ವಿನೂತನ ಮಾದರಿ, ವಿಶಿಷ್ಟ ವಾಸ್ತುಶಿಲ್ಪದಲ್ಲಿ ಪೊಲೀಸ್ ಠಾಣೆಯನ್ನು ಬರೋಬ್ಬರಿ 2.16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಎಲ್ಲರ ಗಮನಸೆಳೆಯುತ್ತಿದ್ದು ಪೊಲೀಸ್ ಠಾಣೆಯ ಫೋಟೊ, ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೆಲವರು ಇದು ತುಂಬಾ ಸುಂದರವಾಗಿ, ವಿಧವಿಧವಾಗಿ ಹೋಲಿಕೆ ಮಾಡಿದ್ದಾರೆ.

- Advertisement -

Related news

error: Content is protected !!