- Advertisement -
- Advertisement -



ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಅಲ್ಲದೇ ಆರಂಭದಿಂದ ಕೊನೆಯ ತನಿಖೆಯವರೆಗೂ ಇದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಆರಂಭದಲ್ಲಿ ಸಾಕ್ಷಿ ನಾಶ ಮಾಡಿದ ಬಗ್ಗೆ ಇವರ ಮೇಲೆ ಆರೋಪ ಕೇಳಿಬಂದಿದ್ದ ಹಿನ್ನಲೆಯಲ್ಲಿ ಎಸ್ಐಟಿ ವಿಚಾರಣೆಗೆ ಮುಂದಾಗಿದೆ. ಶುಕ್ರವಾರ (ಅ.30) ವಿಚಾರಣೆಗೆ ಹಾಜರಾಗುವಂತೆ ನೊಟೀಸ್ನಲ್ಲಿ ಸೂಚಿಸಲಾಗಿದೆ.
2012ರಲ್ಲಿ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಅಧಿಕಾರಿ ಯೋಗೇಶ್ ಗೌಡ ಅವರಿಗೂ ನೋಟಿಸ್ ನೀಡಲಾಗಿತ್ತು. ತನಿಖೆಯ ಪ್ರಾಥಮಿಕ ಹಂತದಲ್ಲಿ ಪೊಲೀಸ್ ಅಧಿಕಾರಿ ಯೋಗೇಶ್ ಸಾಕ್ಷ್ಯನಾಶ ಮಾಡಿದ್ದರು ಎಂದು ಆರೋಪಿಸಲಾಗಿತ್ತು ಎಂದು ತಿಳಿದುಬಂದಿದೆ.
- Advertisement -








