- Advertisement -
- Advertisement -



ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 08-04-2017 ರಂದು ರೆಖ್ಯಾ ಎಂಬಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017 ರಂತೆ ಕಲಂ 395, 397 ಹಾಗೂ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ನಂಜುಂಡ (ಮಾಗಡಿ, ಬೆಂಗಳೂರು) ಎಂಬಾತ ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬೆಂಗಳೂರು ನಗರದ ಗಿಡ್ಡೆನಹಳ್ಳಿ ಪ್ರದೇಶದಲ್ಲಿ ಬಂಧಿಸಿದ್ದಾರೆ. ನಂತರ ದಿನಾಂಕ 13-02-2026 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -








