- Advertisement -
- Advertisement -

ಧಾರವಾಡ : ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಅದರಲ್ಲಿದ್ದ ಲೋಕಾಯುಕ್ತ ಇನ್ಸ್ ಪೆಕ್ಟರೊಬ್ಬರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ದುರ್ಘಟನೆ ನಡೆದಿದೆ.


ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಎಂಬವರೇ ಮೃತಪಟ್ಟ ದುರ್ದೈವಿ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಕ್ಕೆ ಹೋಗುವ ಸಮಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಕಾರು ಕೂಡಾ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








