- Advertisement -
- Advertisement -

ಧಾರವಾಡ: ಜಿಲ್ಲೆಯ ಅಣ್ಣಿಗೇರಿ ತಾಲೂಕಿನಲ್ಲಿ ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಬಾಲಕಿಯನ್ನು ಕೌನ್ಸಲಿಂಗ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಮಕ್ಕಳ ರಕ್ಷಣಾ ಘಟಕದ ಕೌನ್ಸಲಿಂಗ್ ವೇಳೆ ಬಾಲಕಿ ಅಧಿಕಾರಿಗಳಿಗೆ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಳು. ಬಾಲಕಿ ಮಾಹಿತಿ ಆಧರಿಸಿ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.




- Advertisement -