Wednesday, July 22, 2026
spot_imgspot_img
spot_imgspot_img

ಧಾರವಾಡ : ಮನೆಯೊಂದರ ಮೇಲೆ ಕಲ್ಲು ತೂರಾಟ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿಹಚ್ಚಿ ಪರಾರಿ!

- Advertisement -
- Advertisement -

ಧಾರವಾಡ : ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿ, ಹೊರಗೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿಹಚ್ಚಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಸಾಧಿಕ್ ಶೇರೆವಾಡ ಎಂಬುವವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಭಸ್ಮವಾಗಿದೆ. ದುಷ್ಕರ್ಮಿಗಳು ಮೊದಲು ಮನೆಗೆ ಕಲ್ಲು ತೂರಾಟ ಮಾಡಿ ನಂತರ ಬೈಕ್ ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಏಳೆಂಟು ಜನ ದುಷ್ಕರ್ಮಿಗಳು ಜೊತೆ ಸೇರಿ ಈ ಕೃತ್ಯ ನಡೆಸಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಎಸಿಪಿ ಸಿದ್ದನಗೌಡರ, ಇನ್ಸೆಕ್ಟರ್ ಪ್ರಭು ಗಂಗೆನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮನೆ ಸುತ್ತಮುತ್ತಲ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!