Friday, August 14, 2026
spot_imgspot_img
spot_imgspot_img

ಧಾರವಾಡ: “ಅತಿಯಾಗಿ ರೀಲ್ಸ್ ನೋಡಬೇಡ” ಎಂದು ತಾಯಿ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಧಾರವಾಡ: ಜಾಸ್ತಿ ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ.

ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೇಘಾ ಧಾರವಾಡದ ಖಾಸಗಿ ಕಾಲೇಜೊಂದರಲ್ಲಿ ಡಿ.ಇಡಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಹೆಚ್ಚು ಮೊಬೈಲ್ ಬಳಕೆ ಮಾಡುತ್ತಾಳೆ, ರೀಲ್ಸ್ ನೋಡುತ್ತಾಳೆ ಎಂದು ಆಕೆಯ ತಾಯಿ ಮೇಘಾಳಿಗೆ ಬೈದು ಬುದ್ಧಿವಾದ ಹೇಳಿದ್ದಳು. ಇಷ್ಟಕ್ಕೇ ಮೇಘಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿಷ ಸೇವಿಸಿದ್ದ ಮೇಘಾಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದಾಳೆ. ಈ ಸಂಬಂಧ ಗರಗ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!