Wednesday, June 26, 2024
spot_imgspot_img
spot_imgspot_img

ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗ ಆಕಾಂಕ್ಷಿಗಳಿಗೆ ಶಾಸಕರ ಟ್ರಸ್ಟ್‌ ಮೂಲಕ ನೇರ ನೇಮಕಾತಿ- 2000 ಮಹಿಳಾ ಅಭ್ಯರ್ಥಿಗಳು, 500 ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- Advertisement -G L Acharya panikkar
- Advertisement -

ಪುತ್ತೂರು: ಬೆಂಗಳೂರಿನ ಕಂಪನಿಯೊಂದಕ್ಕೆ 2500 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗೆ ಶಾಸಕ ಆಶೋಕ್ ಕುಮಾರ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ನೇರ ನೇಮಕಾತಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು 2000 ಮಹಿಳೆಯರು ಹಾಗೂ 500 ಪುರುಷ ಅಭ್ಯರ್ಥಿಗಳು ನೇರ ನೇಮಕಾತಿ ಮೂಲಕ ಆಯ್ಕೆಯಾಗಲಿದ್ದಾರೆ.

ಪುತ್ತೂರು, ಬಂಟ್ವಾಳ, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ವ್ಯಾಪ್ತಿಯ ಉದ್ಯೋಗ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪೆನಿಯು ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ಉತ್ತಮ ವೇತನವನ್ನು ನೀಡಲಿದೆ

ಎಸ್‌ಎಸ್‌ಎಲ್ಸಿಯಿಂದ ಪದವಿ ತನಕ ವ್ಯಾಸಂಗ ಮಾಡಿರುವ 18ರಿಂದ 26 ವರ್ಷ ವಯೋಮಾನದ 2000 ಮಹಿಳಾ ಅಭ್ಯರ್ಥಿಗಳು ಹಾಗೂ 500ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಾಲ್ಕು ಫೋಟೋ, ಆಧಾರ್ ಕಾರ್ಡು, ಪಾನ್ ಕಾರ್ಡು ಲಗತ್ತಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಸಹಿತ ತರಬೇತಿಯೂ ನಡೆಯಲಿದೆ.
ಪುರುಷರಿಗೆ: ಪುರುಷರಿಗೆ ಕಂಪನಿಯಲ್ಲಿ ಐಟಿಐ, ವೆಲ್ಡರ್ ಹಾಗೂ ಟೆಕ್ನಿಷಿಯನ್ ಉದ್ಯೋಗಾವಕಾಶವಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ. ಅಭ್ಯರ್ಥಿಗಳು ಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ರೈ ಚಾರಿಟೇಬಲ್‌ ಟ್ರಸ್ಟ್ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಟ್ರಸ್ಟ್ ಕಚೇರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಉತ್ತಮ ಕಂಪೆನಿಯ ಜೊತೆ ಟೈ ಅಪ್ ಮಾಡಿಕೊಂಡು ನನ್ನ ವಿಧಾನಸಭಾ ಕ್ಷೇತ್ರದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದೇನೆ. ಅಭ್ಯರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಈ ಕಂಪೆನಿಯಲ್ಲಿ ಉದ್ಯೋಗಕ್ಕೆ ಸೇರಿಕೊಳ್ಳಬಹುದಾಗಿದೆ. ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ವ್ಯಾಪ್ತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಉತ್ತಮ ವೇತನ ಮತ್ತು ಇತರೇ ಸೌಲಭ್ಯಗಳನ್ನು ಕಂಪೆನಿ ಒದಗಿಸಲಿದೆ. ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ತಿಳಿಸಿದ್ದಾರೆ.

- Advertisement -

Related news

error: Content is protected !!