Monday, April 29, 2024
spot_imgspot_img
spot_imgspot_img

ಸುಳ್ಯ : ಬಿಜೆಪಿ ಭದ್ರಕೋಟೆ ಸುಳ್ಯದಲ್ಲೇ ಬುಗಿಲೆದ್ದ ಭಿನ್ನಮತ ..! ಬಿಜೆಪಿ ಕಛೇರಿಗೆ ಬೀಗ ಜಡಿದ ಕಾರ್ಯಕರ್ತರು

- Advertisement -G L Acharya panikkar
- Advertisement -

ಸುಳ್ಯ : ಬಿಜೆಪಿ ಭದ್ರತಕೋಟೆಯಾಗಿರುವ ಸುಳ್ಯದಲ್ಲಿ ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು,ಬಿಜೆಪಿ ಕಚೇರಿಯನ್ನೇ ಲಾಕ್ ಮಾಡಿದ ಘಟನೆ ನಡೆದಿದೆ.

ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಮರು ನೇಮಕ ಮಾಡಲಾಗಿತ್ತು. ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ವಿಧಾನ ಸಭಾ ಚುನಾವಣೆಯ ವೇಳೆ ಎಸ್. ಅಂಗಾರ ಅವರಿಗೆ ಟಿಕೆಟ್ ನಿರಾಕರಿಸಿದಕ್ಕೂ ಮೊದಲೇ ಅಸಮಾಧಾನ ಇದ್ದ ಬಿಜೆಪಿಯ ಕಾರ್ಯಕರ್ತರು ಪಕ್ಷದ ದೋರಣೆಯಿಂದ ಬೇಸೆತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವೆಂಕಟ್ ವಳಲಂಬೆಯವರನ್ನು ಎರಡನೇ ಬಾರಿಗೆ ಸುಳ್ಯ ಮಂಡಲ ಸಮಿತಿಗೆ ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಪ್ರಮುಖರು ಸಭೆ ನಡೆಸಿ ಕೋರ್ ಕಮಿಟಿ ಶಿಫಾರಸ್ಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಖಂಡನೆ ವ್ಯಕ್ತವಾಗಿದೆ.

ಭಾನುವಾರ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ಕ್ಷೇತ್ರದ ಪ್ರಮುಖರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಮಂಡಲ ಸಮಿತಿಯಿಂದ ಅಧ್ಯಕ್ಷ ಸ್ಥಾನಕ್ಕೆ ವಿನಯ ಮುಳುಗಾಡು ಅವರ ಹೆಸರನ್ನು ಜಿಲ್ಲಾ ಸಮಿತಿಗೆ ಕಳುಹಿಸಲಾಗಿತ್ತು ಆದರೆ ಪಟ್ಟಿಯಲ್ಲಿ ಕಾಣಿಸದೇ ಇದ್ದ ವೆಂಕಟ್ ವಳಲಂಬೆಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕೆಲವು ಕಾರ್ಯಕರ್ತರು ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಜೊತೆಗೆ ಪಕ್ಷದಲ್ಲಿ ಹಲವು ವರ್ಷಗಳಿಂದ ನಿಷ್ಠೆಯಿಂದ ದುಡಿಯುತ್ತಿರುವ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -

Related news

error: Content is protected !!