Monday, June 15, 2026
spot_imgspot_img
spot_imgspot_img

ದೂರಶಿಕ್ಷಣ ಪದ್ಧತಿ ಕೆ ಎಸ್ ಒ ಯು ಗೆ ಮಾತ್ರ ಸೀಮಿತ!!!

- Advertisement -
- Advertisement -

ಬೆಂಗಳೂರು : ದೂರಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ ಹಾಗೂ ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವ ಅಂಶವೂ ಸೇರಿದಂತೆ ಉನ್ನತ ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಆಡಳಿತಾತ್ಮಕ, ಕಾನೂನಾತ್ಮಕ  ಸುಧಾರಣೆಗಳುಳ್ಳ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿದೆ.  

ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಸದನದಲ್ಲಿ ಈ ಅಂಶಗಳನ್ನೊಳಗೊಂಡ ʼಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ʼಯನ್ನು ಮಂಡಿಸಿದರು.

ಈ ಮೊದಲು ದೂರಶಿಕ್ಷಣವು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿಯೂ ಲಭ್ಯವಿತ್ತು. ಇನ್ನು ಮುಂದೆ ದೂರಶಿಕ್ಷಣಕ್ಕೆಂದೇ ಮೀಸಲಾಗಿರುವ ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ಮಾತ್ರ ನೀಡಲಾಗುತ್ತದೆ. ಮುಕ್ತ ವಿವಿಯ ವ್ಯಾಪ್ತಿಯೂ ರಾಜ್ಯಾದ್ಯಂತ ಇದ್ದು, ಇನ್ನು ಮುಂದೆ ಇತರೆ ವಿವಿಗಳಲ್ಲಿ ದೂರಶಿಕ್ಷಣ ನೀಡುವುದನ್ನು ನಿಲ್ಲಿಸಲಾಗುವುದು.

- Advertisement -

Related news

error: Content is protected !!