Tuesday, July 28, 2026
spot_imgspot_img
spot_imgspot_img

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈ ಅಧಿಕೃತ ಭೇಟಿ

- Advertisement -
- Advertisement -

ಜಿಲ್ಲಾ ಸಂಪರ್ಕ ಅಧಿಕಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್ ವಿಟ್ಲ ಇವರಿಗೆ ಸನ್ಮಾನ

ಬಪ್ಪನಾಡು: ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಕ್ಲಬ್ಬಿಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಸಂದರ್ಭದಲ್ಲಿ ಸಮಾಜ ಸೇವಕ, ಜಿಲ್ಲಾ ಸಂಪರ್ಕಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕನ್ನಡ ರಾಜ್ಯ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಡಿಯಾರ್‌ (ವಿಠಲ) ಅವರನ್ನು ಕ್ಲಬ್ಬಿನ ಪರವಾಗಿ ರಾಜ್ಯಪಾಲ ಕುಡ್ಪಿ ಅರವಿಂದ್ ಶೆಣೈ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಲಬ್ಬಿನ ಅಧ್ಯಕ್ಷ ಅನಿಲ್ ಕುಮಾರ್, ಕಾರ್ಯದರ್ಶಿ ಅಶ್ವಿನಿ ಶರ್ಮ, ಕೋಶಾಧಿಕಾರಿ ಸಂತೋಷ್ ಕುಮಾರ್, ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ದ್ವಿತೀಯ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಾಂತ್ಯ ಅಧ್ಯಕ್ಷರು, ವಲಯ ಅಧ್ಯಕ್ಷರು ಮತ್ತು ವಲಯ ರಾಯಬಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!