Monday, April 29, 2024
spot_imgspot_img
spot_imgspot_img

ಮಾಣಿ:-ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ.

- Advertisement -G L Acharya panikkar
- Advertisement -

ಮಾಣಿ:-ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆಬ್ರವರಿ 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ , ವಿದ್ಯಾನಗರ ಪೆರಾಜೆ,ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಸಂಸ್ಥೆಯ ಸಂಚಾಲಕರು ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪ್ರಹ್ಲಾದ್ ಶೆಟ್ಟಿ ಜೆ ರವರು ಮಾತನಾಡಿ , ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳುತ್ತಾ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು.

ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ,ಅಮಿತಾ ಎಸ್,ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ & ಗೈಡ್ ಶಿಕ್ಷಕರಾದ ಸಪ್ನ,ಅನಿತಾ ಗೌರಿ,ಲೀಲಾರವರು ಸಹಕರಿಸಿದರು.

ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು.

ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು.ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!