Friday, June 5, 2026
spot_imgspot_img
spot_imgspot_img

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

- Advertisement -
- Advertisement -

ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನ‌ರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿಚಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು.

- Advertisement -

Related news

error: Content is protected !!