Sunday, May 5, 2024
spot_imgspot_img
spot_imgspot_img

ವಿಟ್ಲ ಪೊಲೀಸ್ ಠಾಣೆಗೆ ಇಂದು ದ.ಕ ಜಿಲ್ಲಾ ಸಹಾಯಕ ಪೊಲೀಸ್ ಅಧೀಕ್ಷಕರಾದ ಭಾಸ್ಕರ್ ಒಕ್ಕಲಿಗ ಭೇಟಿ

- Advertisement -G L Acharya panikkar
- Advertisement -

ವಿಟ್ಲ: ಕೋವಿಡ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಟ ನಡೆಸುವವರ ವಿರುದ್ಧ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದು, ಜಿಲ್ಲೆಯಾದ್ಯಂತ ಹಲವು ಪ್ರಕರಣಗಳು ದಾಖಲಾಗಿದೆ ಎಂದು ದ.ಕ ಜಿಲ್ಲಾ ಸಹಾಯಕ ಪೊಲೀಸ್ ಅಧೀಕ್ಷಕ ಭಾಸ್ಕರ್ ಅವರು ತಿಳಿಸಿದರು.

ಅವರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪ್ರಕರಣಗಳ ಮಾಹಿತಿ ಪಡೆದುಕೊಂಡರು. ಬೇರೆ ಜಿಲ್ಲೆಗೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ಜನರು ಹೆಚ್ಚಿನ ರೀತಿಯಲ್ಲಿ ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ.

ಕೆಲವರು ಸುಳ್ಳು ನೆಪ ಹೇಳಿ ಮನೆಯಿಂದ ಹೊರಬರುತ್ತಿದ್ದು, ಅಂತವರ ಬಗ್ಗೆ ವಿಚಾರ ನಡೆಸಿ, ಕ್ರಮ ಕೈಗೊಳ್ಳಲಾಗುತ್ತಿದೆ. ಸುಳ್ಳು ನೆಪ ಹೇಳಿ ಹೊರಬರುವುದು ಗೊತ್ತಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ದ.ಕ ಜಿಲ್ಲಾ ಪೊಲೀಸರು ಅಲ್ಲಲ್ಲಿ ನಾಕಾಬಂಧಿ ಅಳವಡಿಸಿ ಸರ್ಕಾರ ಲಾಕ್ ಡೌನ್ ಯಶಸ್ವಿಗೊಳಿಸಲು ಕೆಲಸ ಮಾಡುತ್ತಿದ್ದಾರೆ.

ವಿಟ್ಲ ಪೊಲೀಸ್ ಠಾಣೆ ಮೇಲ್ದರ್ಜೆಗೇರಿದ್ದು, ಸದ್ಯದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದರು. ವಿಟ್ಲ ಪೊಲೀಸ್ ಠಾಣೆಯ ಪ್ರಭಾರ ಎಸೈ ರಾಜೇಶ್ ಕೆ.ವಿ ಉಪಸ್ಥಿತರಿದ್ದರು.

- Advertisement -

Related news

error: Content is protected !!