Friday, May 23, 2025
spot_imgspot_img
spot_imgspot_img

ರಾಜ್ಯದಲ್ಲಿ 2 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ.

- Advertisement -
- Advertisement -

ಇಂದು ಒಂದೇ ದಿನ 6706 ಮಂದಿಗೆ ಸೋಂಕು..!
ರಾಜ್ಯದಲ್ಲಿ ಈವರೆಗೆ ಒಟ್ಟು 3613 ಕೊರೊನಾ ಸೋಂಕಿಗೆ ಬಲಿ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6706 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 103 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 203200 ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿಈವರೆಗೆ 121242 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1893 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 22 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2212 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 33148 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 246 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 641 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8071 ಆಗಿದ್ದು, ಇಲ್ಲಿಯವರೆಗೆ 5873 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1948 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 402 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 7174 ಆಗಿದ್ದು ,ಇಲ್ಲಿಯವರೆಗೆ 4138 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2966 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!