Friday, May 23, 2025
spot_imgspot_img
spot_imgspot_img

BIG BLAST:-ರಾಜ್ಯದಲ್ಲಿ ಒಂದೇ ದಿನ 7908 ಮಂದಿಗೆ ಸೋಂಕು..!*

- Advertisement -
- Advertisement -

*ದ.ಕ ಜಿಲ್ಲೆಯಲ್ಲಿ 307 ಮಂದಿಗೆ ವಕ್ಕರಿಸಿದ ಕೊರೊನಾ.
*ಉಡುಪಿ ಜಿಲ್ಲೆಯಲ್ಲಿ 322 ಮಂದಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7908 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 104 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 211108 ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 126499 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2452 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 22 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 463 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 35115 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 307 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 242 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8378 ಆಗಿದ್ದು, ಇಲ್ಲಿಯವರೆಗೆ 6115 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2007 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 322 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 7496 ಆಗಿದ್ದು ,ಇಲ್ಲಿಯವರೆಗೆ 4752 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2667 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!