Monday, June 15, 2026
spot_imgspot_img
spot_imgspot_img

ಕೊರೊನಾ ರಣಕೇಕೆ :ದಕ್ಷಿಣ ಕನ್ನಡದಲ್ಲಿ 271 , ಉಡುಪಿ 241 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು ದಾಖಲೆಯ 8818 ಮಂದಿಗೆ ಸೋಂಕು..!*

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 8818 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 114 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 219926 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ    ಈವರೆಗೆ 134811 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3495 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 35 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2034 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 34858 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 271 ಮಂದಿಗೆ ಸೋಂಕು ತಗುಲಿದೆ. 6 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 202 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8649 ಆಗಿದ್ದು, ಇಲ್ಲಿಯವರೆಗೆ 6317 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2070 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 241 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 7737 ಆಗಿದ್ದು ,ಇಲ್ಲಿಯವರೆಗೆ 4981 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2677 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!