Thursday, May 2, 2024
spot_imgspot_img
spot_imgspot_img

ಕೊರೊನಾ ರಣಕೇಕೆ :ದಕ್ಷಿಣ ಕನ್ನಡದಲ್ಲಿ 144 , ಉಡುಪಿ 268 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 6317 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6317 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 115 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 233283 ಕ್ಕೆಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 148562 ಮಂದಿ ಡಿಸ್ಚಾರ್ಜ್ಆ ಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2053 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 39 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2190 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 34408 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 144 ಮಂದಿಗೆ ಸೋಂಕು ತಗುಲಿದೆ. 8 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 209 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9022 ಆಗಿದ್ದು, ಇಲ್ಲಿಯವರೆಗೆ 6654 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2091 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 268 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 8242 ಆಗಿದ್ದು ,ಇಲ್ಲಿಯವರೆಗೆ 5590 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2653 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!