Saturday, June 28, 2025
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 7665 ಮಂದಿಗೆ ಸೋಂಕು..!* ದಕ್ಷಿಣ ಕನ್ನಡದಲ್ಲಿ 279 , ಉಡುಪಿ 421 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 139  ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8,387 ಮಂದಿ ಕೊರೊನಾ ದಿಂದ ಚೇತರಿಸಿಕೊಂಡು,ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಆಗಿದ್ದಾರೆ. ಹಾಗೇ 7,665 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ 139  ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 2,40,948ಕ್ಕೆ ಏರಿಕೆಯಾಗಿದ್ದು, ಚೇತರಿಸಿಕೊಂಡವರು 1,56,949 ಮಂದಿ. ಮೃತಪಟ್ಟವರು 4201 ಸೋಂಕಿತರು ಹಾಗೂ ಸಕ್ರಿಯ ಪ್ರಕರಣಗಳು 79,782 ಆಗಿದೆ.

ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2242 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 49 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3520 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 33081 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 279 ಮಂದಿಗೆ ಸೋಂಕು ತಗುಲಿದೆ. 9 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 173 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9301 ಆಗಿದ್ದು, ಇಲ್ಲಿಯವರೆಗೆ 6827 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2753 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 421 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 8663 ಆಗಿದ್ದು ,ಇಲ್ಲಿಯವರೆಗೆ 5830 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2653 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!