Wednesday, May 8, 2024
spot_imgspot_img
spot_imgspot_img

BIG BLAST:- ರಾಜ್ಯದಲ್ಲಿ ಇಂದು 7571 ಮಂದಿಗೆ ಸೋಂಕು..!* ದಕ್ಷಿಣ ಕನ್ನಡದಲ್ಲಿ 202 , ಉಡುಪಿ 278 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 93  ಸೋಂಕಿತರ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 7571 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 93 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 264546 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 176942 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2948 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 22 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2580 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 34532 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 202 ಮಂದಿಗೆ ಸೋಂಕು ತಗುಲಿದೆ. 5 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 64 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9914 ಆಗಿದ್ದು, ಇಲ್ಲಿಯವರೆಗೆ 7184 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2420 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 278 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 9667 ಆಗಿದ್ದು ,ಇಲ್ಲಿಯವರೆಗೆ 6735 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2850 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!