Sunday, June 14, 2026
spot_imgspot_img
spot_imgspot_img

*ಕೊರೊನಾ ರಣಕೇಕೆ :ರಾಜ್ಯದಲ್ಲಿ ಇಂದು 5938 ಮಂದಿಗೆ ಸೋಂಕು..!* ದಕ್ಷಿಣ ಕನ್ನಡದಲ್ಲಿ 193 , ಉಡುಪಿ 117 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 68  ಸೋಂಕಿತರ ಸಾವು.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5938 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 68 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 277814 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 189564 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2126 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 5 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1468 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 34877 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 193 ಮಂದಿಗೆ ಸೋಂಕು ತಗುಲಿದೆ. 5 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 164 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10330 ಆಗಿದ್ದು, ಇಲ್ಲಿಯವರೆಗೆ 7668 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2343 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 117 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 10132 ಆಗಿದ್ದು ,ಇಲ್ಲಿಯವರೆಗೆ 7279 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2769 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!