ಬೆಂಗಳೂರು : ಕೊರೊನಾ ಮಹಾಮಾರಿಯ ಇಂದು ಬೆಂಗಳೂರಿನಲ್ಲಿ ಒಂದೇ ದಿನ ಬರೋಬ್ಬರಿ 1525 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಬೆಂಗಳೂರಿನಲ್ಲಿ ಕೊರೊನಾ ಸೊಂಕಿಗೆ 45 ಮಂದಿ ಇಂದು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 2627 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 38843 ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ ಬರೋಬ್ಬರಿ 71 ಮಂದಿ ಸಾವನ್ನಪ್ಪಿದಾರೆ.
ಮಂಗಳೂರು : ದ.ಕ ಜಿಲ್ಲೆಯಲ್ಲಿ ಇಂದು ದಾಖಲೆಯ ಕೊರೋನಾ ಮಹಾ ಸ್ಪೋಟ.!ಇಂದು ಜಿಲ್ಲೆಯಲ್ಲಿ196 ಕೊರೊನಾ ಕೇಸ್ ಪತ್ತೆ. ಪ್ರಾಥಮಿಕ ಸಂಪರ್ಕದಿಂದ 20 ಮಂದಿ , ILI 91, SARI 16 ಪ್ರಕರಣ , ಸಂಪರ್ಕಕ್ಕೆ ಸಿಗದ 57 ಪ್ರಕರಣಗಳು, ಶಸ್ತ್ರಚಿಕಿತ್ಸೆ ಮಾಡೋ ಮೊದಲು 2 ಜನರಿಗೆ ಕೊರೋನಾ ಪಾಸಿಟಿವ್, ಅಂತರಾಷ್ಟ್ರೀಯ ಪ್ರಯಾಣದಿಂದ 10 ಪ್ರಕರಣ ಪತ್ತೆ ಯಾಗಿದೆ .
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಬರೋಬ್ಬರಿ 5 ಮಂದಿ ಬಲಿ ಪಡೆದಿದೆ.ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ನಾಲ್ವರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದಾರೆ. ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ , ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರು ನಗರದ ಉರ್ವಾಸ್ಟೋರ್ ನ 72 ವರ್ಷದ ವೃದ್ಧ., ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ.ಹಾಗೂ ನಗರದ ಬಂದರು ನಿವಾಸಿ 68 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 46ಕ್ಕೇರಿಕೆ ಏರಿಕೆ ಯಾಗಿದೆ. ಕಳೆದೊಂದು ವಾರದಿಂದ ಕೊರೋನಾಕ್ಕೆ ಸಾವನ್ನಪ್ಪುವವರ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಕೊರೊನಾ ಸೋಂಕಿತರ ಸಂಖ್ಯೆ ದಿನಂಪ್ರತಿ ಏರಿಕೆಯಾಗುತ್ತಿದ್ದು, ಜಿಲ್ಲೆಯನ್ನು ಮತ್ತೊಮ್ಮೆ ಲಾಕ್‌ಡೌನ್ ಮಾಡುವಂತೆ ಒತ್ತಾಯ ಕೇಳಿಬಂದಿದೆ.