- Advertisement -
- Advertisement -
ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ
ಮಂಗಳೂರು: ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆ ಮತ್ತೆ ಕೊಂಚವೂ ಬಿಡುವು ಕೊಡದೆ ಮಳೆ ಸುರಿಯುತ್ತಿದೆ. ಮಳೆ ಹೆಚ್ಚಾಗಿರುವುದರಿಂದ ನೀರು ಹರಿಯಲು ಸ್ಥಳವಿಲ್ಲದೆ ರಸ್ತೆ ಮೇಲೆ ನೀರು ಹರಿಯುತ್ತಿದೆ.
ಕಳೆದ 8-9 ದಿನಗಳಿಂದ ಮಳೆ ಅತ್ಯಧಿಕವಾಗಿ ಸುರಿಯುತ್ತಿದ್ದು, ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಹಲವೆಡೆ ನೆರೆ ಸಮಸ್ಯೆಯೂ ತಲೆದೋರಿದೆ.ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಪುತ್ತೂರು ತಾಲೂಕಿನಲ್ಲೂ ಭಾರೀ ಮಳೆಗಿದೆ.. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರಗಳ ಜನರನ್ನು ಜಿಲ್ಲಾಡಳಿತ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಿದೆ. ಇದಕ್ಕಾಗಿ ಮಂಗಳೂರಿನಲ್ಲಿ ಈಗಾಲೇ ನಾಲ್ಕು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.
- Advertisement -