ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮಂಗಳೂರು: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಜಾರಿಯಾಗಿದೆ. ಹೀಗಾಗಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಹಾಗಿದ್ರೆ ಜಿಲ್ಲೆಯಲ್ಲಿ 7 ದಿನಗಳ ಲಾಕ್ ಡೌನ್ ನಲ್ಲಿ ಯಾವ ಸೇವೆಗಳು ಲಭ್ಯವಿರುತ್ತದೆ ಎಂಬುದರ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಲಭ್ಯವಿರುವ ಅಗತ್ಯ ಸೇವೆಗಳು
*ಎಲ್ಲಾ ಆರೋಗ್ಯ ಸಂಬಂಧಿತ ಸೇವೆಗಳು
*ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳು
*ಎಲ್ಲಾ ಬಗೆಯ ಸರಕು ಸಾಗಾಣಿಕೆ
*ಜೀವನಾವಶ್ಯಕ ವಸ್ತುಗಳನ್ನು ಹಾಗೂ ವೈದ್ಯಕೀಯ ಉಪಕರಣಗಳನ್ನು ಪೂರೈಸುವ ಕೈಗಾರಿಕೆಗಳು
*ಅಗ್ನಿಶಾಮಕ, ವಿಪತ್ತು ನಿರ್ವಹಣೆ, ಇತರೆ ತುರ್ತು ಸೇವೆಗಳು
*ಅಗತ್ಯ ಸೇವೆಗಳನ್ನು ನಿರ್ವಹಿಸುವ ಕಛೇರಿಗಳು

ಮಧ್ಯಾಹ್ನ 11ಗಂಟೆಯೊಳಗೆ ಅಗತ್ಯ ಸಾಮಾನು ಖರೀದಿಸಿ
ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಪ್ರತೀ ದಿನ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 11 ಗಂಟೆಯವರೆಗೆ ಅಗತ್ಯ ಸಾಮಾಗ್ರಿಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಪಡಿತರ ಅಂಗಡಿಗಳು, ಹಣ್ಣು, ತರಕಾರಿ ಅಂಗಡಿ ತೆರೆಯಲು ಮಾತ್ರ ಅವಕಾಶ. ಆದ್ರೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
