- Advertisement -
- Advertisement -

ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಹೀಗಾಗಿ ಕಂದಾಯ ಸಚಿವ ಆರ್.ಅಶೋಕ್ ಇಂದು ಮತ್ತು ನಾಳೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ವಿಮಾನ ಮೂಲಕ ಪ್ರಯಾಣ ಬೆಳೆಸಲಿರುವ ಅವರು ರಸ್ತೆ ಮಾರ್ಗ ಮೂಲಕ ಉಡುಪಿಗೆ ತೆರಳಿದ್ದಾರೆ. ಬಳಿಕ ಪಡುಬಿದ್ರಿಯ ಕಡಲ್ಕೊರೆತ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ನಂತರ ಮಳೆ ಹಾನಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಭಟ್ಕಳ ಹಾಗೂ ಹೊನ್ನಾವರದಲ್ಲಿ ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಇಂದು ಉಡುಪಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಮಂಗಳೂರಿಗೆ ಪ್ರಯಾಣ ಬೆಳಸಲಿರುವ ಆರ್.ಅಶೋಕ್ ಮಳೆ ಹಾನಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -