ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಆಗಸ್ಟ್ 8 ರಿಂದ 9 ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, 9ರಿಂದ 11ರವರೆಗೆ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ.
ಆಗಸ್ಟ್ 9 ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಸೋಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24ಗಂಟೆಯಲ್ಲಿ 101 ಮಿಲಿ ಮೀಟರ್ ಮಳೆ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ.
ಬೆಳ್ತಂಗಡಿ-136, ಸುಳ್ಯ-111, ಪುತ್ತೂರು-94, ಬಂಟ್ವಾಳ-93, ಮಂಗಳೂರು-37 ಮಿಲಿ ಮೀಟರ್ ಮಳೆ ದಾಖಲಾಗಿದೆ.ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನದಿಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದ್ದು ತಗ್ಗು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಿವೆ.
ವ್ಯಾಪಕ ಮಳೆಯಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೆಲವೊಂದು ಸಾರ್ವಜನಿಕರಿಗೆ ಮುನ್ಸೂಚನೆಯನ್ನು ನೀಡಿದ್ದು
ಕೆಲವೊಂದು ಸಾರ್ವಜನಿಕರಿಗೆ ಮುನ್ಸೂಚನೆಯನ್ನು ನೀಡಿದ್ದು
– ಸಾರ್ವಜನಿಕರು ನದಿ ಹಾಗೂ ಸಮುದ್ರಗಳಿಗೆ ಇಳಿಯದಂತೆ ಎಚ್ಚರದಿಂದಿರಬೇಕು
– ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳಿಂದ ದೂರವಿರಬೇಕು.
– ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಸ್ಥಾನಗಳಲ್ಲಿ ಇರುವಂತೆ ಸೂಚಿಸಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಸಹಾಯವಾಣಿ 1077 ಅಥವಾ 9483908000 ಸಂಪರ್ಕಿಸಬಹುದಾಗಿದೆ.