Thursday, June 4, 2026
spot_imgspot_img
spot_imgspot_img

ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆ ಶಿವಕುಮಾರ್‍..!

- Advertisement -
- Advertisement -

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ ಪ್ರಕಾರ, ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿ ಡಿಕೆಶಿ ಮೊದಲ ಸ್ಥಾನದಲ್ಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಡಿಕೆಶಿ ಸುಮಾರು 1,413 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿಯನ್ನು ಘೋಷಿಸಿಕೊಂಡಿದ್ದರು. ಈ ಪೈಕಿ 273 ಕೋಟಿ ಚರ ಆಸ್ತಿ ಇದ್ದರೆ ರಿಯಲ್ ಎಸ್ಟೇಟ್ ಮತ್ತು ಜಮೀನು ಸೇರಿ ಸ್ಥಿರ ಆಸ್ತಿ 1,140 ಕೋಟಿ ರೂ. ಇದೆ. 265 ಕೋಟಿ ರೂ.ಗಿಂತ ಹೆಚ್ಚು ತನಗೆ ಸಾಲವಿದೆ ಎಂದು ಹೇಳಿಕೊಂಡಿದ್ದರು.

ಡಿಕೆಶಿ ಅವರ ಆಸ್ತಿಯಲ್ಲಿ ಬೆಂಗಳೂರು ಹಾಗೂ ದೇಶದ ಪ್ರಮುಖ ನಗರಗಳಲ್ಲಿರುವ ಭೂಮಿ, ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು (ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ), ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಗಳ ಪಾಲು ಪ್ರಮುಖವಾಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. 2024ರ ವಿಧಾನಸಭೆ ಚುನಾವಣೆಗೂ ಮುನ್ನ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದರು.
ತಮಿಳುನಾಡಿನ ಮುಖ್ಯಮಂತ್ರಿ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು 648 ಕೋಟಿ ರೂ. ಮೊತ್ತದ ಆಸ್ತಿಯೊಂದಿಗೆ ದೇಶದಲ್ಲೇ ಸದ್ಯ ಎರಡನೇ ಸ್ಥಾನದಲ್ಲಿದ್ದಾರೆ.

ದೇಶದ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮಹಾರಾಷ್ಟ್ರದ ಘಾಟ್‌ಕೋಪರ್ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪರಾಗ್‌ ಶಾ ಮೊದಲ ಸ್ಥಾನದಲ್ಲಿದ್ದಾರೆ. ಅವರು 2024ರ ಚುನಾವಣೆಗೂ ಮುನ್ನ ಬರೋಬ್ಬರಿ 3,383 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದರು ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!