Sunday, July 19, 2026
spot_imgspot_img
spot_imgspot_img

ಎರಡು ವಾರಗಳ ಬಳಿಕ ದ.ಕ ಜಿಲ್ಲೆಯಲ್ಲಿ ಶಾಲೆ ಪ್ರಾರಂಭ; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶಾಲೆ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯೆ ನೀಡಿದ್ದು, ಎರಡುವಾರಗಳ ಬಳಿಕ ಶಾಲೆಗಳನ್ನು ಆರಂಭಿಸುವ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಜಿಲ್ಲಾಡಳಿತದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಶಿಕ್ಷಣ ತಜ್ಞರು ಕೂಡ ಸಲಹೆ ನೀಡಿದ್ದಾರೆ. ಸದ್ಯ ಮೊದಲ ಹಂತದಲ್ಲಿ ಪಿಯು ಕಾಲೇಜು ಆರಂಭ ನಡೆಸಿ ಬಳಿಕ ಪರಿಸ್ಥಿತಿ ಅವಲೋಕಿಸಲಾಗುವುದು.

ಪಿಯು ಕಾಲೇಜು ಆರಂಭಿಸಿದ ಬಳಿಕ ಪರಿಸ್ಥಿತಿಯನ್ನು ಗಮನಿಸಲಾಗುವುದು. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!