- Advertisement -
- Advertisement -
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ಹೈಕೋರ್ಟ್ ನಲ್ಲಿ ವಜಾ ಆಗಿದೆ. ಡಿಕೆಶಿ ಆಸ್ತಿ ಸಂಬಂಧ ಸಿಬಿಐ ತನಿಖೆ ನಡೆಸಲು ಸರ್ಕಾರ ಸಮ್ಮತಿ ನೀಡಿದ್ದನ್ನು ಪ್ರಶ್ನಿಸಿ ಡಿಕೆಶಿ ಆಪ್ತ ಶಿವಣ್ಣ ಸರ್ಕಾರಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾ ಮಾಡಿದೆ.

ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ಹೀಗಾಗಿ ರಾಜ್ಯದಲ್ಲಿ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ಅಗತ್ಯ ಎಂದು ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

ಸಿಬಿಐ ಈಗ ಪ್ರಾಥಮಿಕ ತನಿಖೆ ಆರಂಭಿಸಿದೆ. ಸಮ್ಮತಿಗೆ ಸರ್ಕಾರ ಸವಿವರವಾದ ಕಾರಣ ನೀಡಬೇಕಿಲ್ಲ ಎಂದು ಸರ್ಕಾರದ ಪರ ವಕೀಲ ಎ.ಜಿ.ಪ್ರಭುಲಿಂಗ್ ನಾವಡಗಿ ವಾದ ಮಂಡಿಸಿದ್ದರು.

- Advertisement -