Saturday, June 6, 2026
spot_imgspot_img
spot_imgspot_img

ಡಿಕೆಶಿ ಮನೆಯಲ್ಲಿ ಬರೋಬ್ಬರಿ 50 ಲಕ್ಷ ಹಣ ಪತ್ತೆ

- Advertisement -
- Advertisement -

ಬೆಂಗಳೂರು: ಇಂದು ಬೆಳಗ್ಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಇದೀಗ ಡಿಕೆಶಿ ಮನೆಯಲ್ಲಿ ಬರೋಬ್ಬರಿ 50 ಲಕ್ಷ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೇಡ್ ವೇಳೆ ಡಿಕೆಶಿಯ ನಿವಾಸದಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಆ ಹಣವನ್ನು ಸೀಜ್ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಹಣದ ಬಗ್ಗೆ ವಿಚಾರಣೆ ಮಾಡುವ ಸಲುವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.


ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆದು ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುವ ಸಾಧ್ಯತೆ ಇದೆ. ಡಿಕೆಶಿ ಮನೆ ಮೇಲೆ ಮಾತ್ರವಲ್ಲದೇ ಸೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ದಾಳಿ ಮಾಡಿದೆ. ಡಿಕೆಶಿ, ಡಿ.ಕೆ.ಸುರೇಶ್ ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ. ಒಟ್ಟು 14 ವಿವಿಧ ಸ್ಥಳಗಳ ಮೇಲೆ ದಾಳಿ ಸಿಬಿಐ ತಂಡ ದಾಳಿ ಮಾಡಿದೆ.

- Advertisement -

Related news

error: Content is protected !!