Monday, June 30, 2025
spot_imgspot_img
spot_imgspot_img

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ ಶಿವಕುಮಾರ್‌

- Advertisement -
- Advertisement -

ಬೆಳ್ತಂಗಡಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿನ್ನೆ (ಎ.19) ಆಗಮಿಸಿ ವಾಸ್ತವ್ಯ ಹೂಡಿದ್ದ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎ.20 ರಂದು ಮುಂಜಾನೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದರು.

ಕ್ಷೇತ್ರಕ್ಕೆ ಆಗಮಿಸಿದ ಡಿಸಿಎಂ ಅವರನ್ನು ಡಿ.ಸುರೇಂದ್ರ ಕುಮಾರ್ ಸ್ವಾಗತಿಸಿದರು. ಇವರೊಂದಿಗೆ ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

- Advertisement -

Related news

error: Content is protected !!