- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಿಮೆಯಾಗುತ್ತಿಲ್ಲ ಕೊರೋನಾ ಪಾಸಿಟಿವ್ ಹಾಗೂ ಸಾವಿನ ಸಂಖ್ಯೆ. ಜಿಲ್ಲೆಯಲ್ಲಿ ಇಂದು 648 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ದ.ಕ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಆರು ಮಂದಿ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 983 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 8.51%

ಇಂದು 707 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 6,954 ಆಕ್ವೀವ್ ಕೇಸ್ ಇದೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 84,393 ಪಾಸಿಟಿವ್ ಕೇಸ್ ಪತ್ತೆಯಾಗಿದೆ.


- Advertisement -








